ಫೆ.೨೮ ರಂದು ರಾಷ್ಟ್ರೀಯ ವಿಜ್ಞಾನೋತ್ಸವ: ಹೆಚ್.ಎಸ್. ಚಂದ್ರಶೇಖರ್

 


ಹಾಸನ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಸಿ.ವಿ. ರಾಮನ್ನರ ಜನ್ಮ ಶತಮಾನೋತ್ಸವ ಸ್ಮರಣೆಯ ಸಂದರ್ಭದಲ್ಲಿ ಫೆಬ್ರವರಿ ೨೮ರ ಬುಧವಾರದಂದು ಎವಿಕೆ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

      .ವಿ.ಕೆ ಪದವಿಪೂರ್ವ ಕಾಲೇಜು, ಹಾಸನ. ಭಾರತ ಜ್ಞಾನ ವಿಜ್ಞಾನ ಸಮಿತಿ, ಹಾಸನ ಜಿಲ್ಲೆ ಕ್ವಾರ್ಕ್ ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನೋತ್ಸವ ಆಚರಣೆ ಮಾಡಲಾಗುತ್ತಿದೆ. ಭಾರತಕ್ಕೆ ವಿಜ್ಞಾನ ಕ್ಷೇತ್ರದಲ್ಲಿ ಮೊಟ್ಟಮೊದಲ ನೊಬೆಲ್ ಪಾರಿತೋಷಕ ತಂದುಕೊಟ್ಟು ಶ್ರೇಷ್ಠ ಭೌತವಿಜ್ಞಾನಿ ಭಾರತರತ್ನ ಸರ್.ಸಿ.ವಿ.ರಾಮನ್ನರ ರಾಮನ್ ಪರಿಣಾಮ ಜಗತ್ತಾಹೀರುಗೊಳಿಸಿದ ದಿನ ಫೆಬ್ರವರಿ ೨೮ ಆಗಿದ್ದು,   ನೆನಪಿನಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಂಶೋಧನೆಗೆ ಪ್ರೋತ್ಸಾಹ ನೀಡಲು  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು